ಗದಗ ಜಿಲ್ಲಾ ಬಿಜೆಪಿಗೆ ನೂತನ ಅಧ್ಯಕ್ಷರ ನೇಮಕ-ನೂತನ ಸಾರಥಿ ಯಾರು?

Spread the love

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನಕುಮಾರ ಕಟೀಲ್ ನೇಮಿಸಿ ಆದೇಶ

 

ಪ್ರಜಾಪಥ ವಾರ್ತೆ

ಬೆಂಗಳೂರು/ಗದಗ: ತೆರವಾಗಿರುವ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಗದಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಮುತ್ತಣ್ಣ ಲಿಂಗನಗೌಡ್ರ ಅವರಿಗೆ ಬಡ್ತಿ ನೀಡಿರುವ ಪಕ್ಷ, ಗದಗ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿದೆ.

ಈ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನಕುಮಾರ ಕಟೀಲ್ ಅವರು ಇಂದು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಇನ್ನು ಕಳೆದ ಕೆಲ ದಿನಗಳ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಗದಗ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಮೋಹನ ಮಾಳಶೆಟ್ಟಿ ಅವರನ್ನು ಧಾರವಾಡ ಗ್ರಾಮಾಂತರದ ‘ಸಹ-ಪ್ರಭಾರಿ’ಯನ್ನಾಗಿ ನೇಮಿಸಿ ಜವಾಬ್ದಾರಿ ನೀಡಲಾಗಿದೆ.

Leave a Reply

Your email address will not be published. Required fields are marked *